ಜಮ್ಮು: ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೋಮವಾರ ತಿಳಿಸಿದ್ದಾರೆ.
ವಿಧಾನಸಭೆ ಆರಂಭಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆ.
ಆದರೆ ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆ ಅಸಾಧ್ಯ ಎಂದು ಹೇಳಿದ್ದಾರೆ.
ಹಿರಾನಗರ್ ವಲಯದಲ್ಲಿ ಅಂತರರಾಷ್ಟ್ರೀಯ ಗಡಿಯ ಬಳಿ ಸನ್ಯಾಲ್ ಗ್ರಾಮದಲ್ಲಿ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಒಮರ್, ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಗುಪ್ತಚರ ಇಲಾಖೆಗೆ ಸಿಕ್ಕ ಮಾಹಿತಿ ಅನುಸಾರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಒಮರ್ ಹೇಳಿದ್ದಾರೆ.
ಈ ಬಗ್ಗೆ ಈಗಲೇ ಹೇಳಿಕೆ ನೀಡುವುದು ಸರಿಯಲ್ಲ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.