ಕಾಸರಗೋಡು: ಜಿಲ್ಲಾ ಮಟ್ಟದ ತ್ಯಾಜ್ಯ ಮುಕ್ತ ನವ ಕೇರಳ ಘೋಷಣೆ ಏಪ್ರಿಲ್ 5 ರಂದು ಕಾಸರಗೋಡು ನಗರಸಭೆಯ ಟೌನ್ ಹಾಲ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗಗಿ ಸಂಘಟನಾ ಸಮಿತಿ ರಚಿಸಲಾಯಿತು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳು, ಹಸಿರು ಕ್ರಿಯಾ ಸೇನೆ, ಶಾಲೆಗಳು, ವಿವಿಧ ಸಂಘ ಸಂಸ್ಥೆಗಳು, ಗ್ರಂಥಾಲಯಗಳು ಮತ್ತು ನಗರಗಳ ಅತ್ಯುತ್ತಮ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು. ಸಂಸದರು ಮತ್ತು ಶಾಸಕರು ಪೆÇೀಷಕರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಅಧ್ಯಕ್ಷರಾಗಿ ಹಾಗೂ ಜಿಲ್ಲಾಧಿಕಾರಿ ಸಂಚಾಲಕರಾಗಿರುವ ಸಂಘಟನಾ ಸಮಿತಿಯನ್ನು ರಚಿಸಲಾಯಿತು.
ಕಾರ್ಯಕಾರಿ ಸಂಚಾಲಕರನ್ನಾಗಿ ಸ್ಥಳೀಯಾಡಳಿತ ಇಲಾಖೆಯ ಜಂಟಿ ನಿರ್ದೇಶಕ ಜಿ. ಸುಧಾಕರನ್ ಹಾಗೂ ಎಡಿಎಂ ಪಿ. ಅಖಿಲ್, ಹಸಿರು ಕೇರಳ ಮಿಷನ್ ಜಿಲ್ಲಾ ಸಂಯೋಜಕ ಕೆ. ಬಾಲಕೃಷ್ಣನ್, ಶುಚಿತ್ವ ಮಿಷನ್ ಸಂಯೋಜಕ ಪಿ. ಜಯನ್ ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಿಥುನ್ ಕೃಷ್ಣನ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.