ಪೆರ್ಲ : ಕೇರಳ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾಸರಗೋಡು ಜಿಲ್ಲಾ ಘಟಕ ವತಿಯಿಂದ ತರಬೇತಿ ಶಿಬಿರ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರುಗಿತು. ಎಣ್ಮಕಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಲಾ ಇಬ್ರಾಹಿಂ ಸಮರಂಭ ಉದ್ಘಾಟಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಾರಾಯಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಶಿಬಿರದ ಪ್ರಯೋಜನಗಳ ಬಗ್ಗೆ ಮಾಹಿತಿ ಈಡಿದರು.ಬಿಆರ್‍ಸಿ ಜಿಲ್ಲಾ ಸಂಯೋಜಕಿ ರಮ್ಯಾ ಹಾಗೂ ಯತೀಶ್ ಬಲ್ಲಾಳ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಶಿಬಿರ ನಡೆಸಿಕೊಟ್ಟರು. ಮನೆಯವರೊಂದಿಗೆ ಹಾಗೂ ಸಮಾಜದಲ್ಲಿ ಭಾವನಾತ್ಮಕವಬಾಗಿ ಬೆಸೆಯುವ ಬಗ್ಗೆ ಶಿಬಿರದಲ್ಲಿ ಮಾಹಿತಿ ಒದಗಿಸಲಾಯಿತು. ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಶಿಕ್ಷಕರಾದ ಶ್ರೀಹರಿ ಸವಾಗತಿಸಿದರು. ಉಮೇಶ್ ಕೆ. ಪೆರ್ಲ ಕಾರ್ಯಕ್ರಮ ನಿರೂಪಿಸಿದರು. ಮಮತಾ ವಂದಿಸಿದರು.