ಮುಳ್ಳೇರಿಯ: ಕ್ಯಾಂಪ್ಕೋ ಸಂಸ್ಥೆಯಲ್ಲಿ ಸುದೀರ್ಘ 30 ವರ್ಷ ಸೇವೆ ಸಲ್ಲಿಸಿ ಬಂದಡ್ಕ ಶಾಖಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೇಮ್ ಕುಮಾರ್ ಪಿ ಅವರು ಫೆ.28ರಂದು ತಮ್ಮ ಸೇವೆಯಿಂದ ನಿವೃತ್ತರಾದರು. ಈ ಸಂದರ್ಭದಲ್ಲಿ ಅವರ ಸೇವೆಯನ್ನು ಗೌರವಿಸಿ ಕ್ಯಾಂಪ್ಕೋ ಬದಿಯಡ್ಕ ಪ್ರಾದೇಶಿಕ ವ್ಯವಸ್ಥಾಪಕರಾದ ಚಂದ್ರ ಎಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬದಿಯಡ್ಕ ವಲಯದ ಶಾಖಾ ವ್ಯವಸ್ಥಾಪಕರು ಹಾಗೂ ಬ್ಯಾಂಪ್ಕೊಸ್, ಬಂದಡ್ಕ ಆಡಳಿತ ಮಂಡಳಿ ಮತ್ತು ನೌಕರರು ಭಾಗವಹಿಸಿದ್ದರು.