ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯವು (ಇ.ಡಿ) ತನಿಖೆ ನಡೆಸುತ್ತಿರುವ ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರಿಗೆ ದೆಹಲಿ ಹೈಕೋರ್ಟ್ ಇಂದು (ಮಂಗಳವಾರ) ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಕಾಯ್ದಿರಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ಇಂದು ಪ್ರಕಟಿಸಿದ್ದಾರೆ.
'ಅಗಸ್ಟಾ ವೆಸ್ಟ್‌ಲ್ಯಾಂಡ್‌ನಿಂದ ₹3,600 ಕೋಟಿ ಮೊತ್ತದ 12 ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಹಗರಣ ನಡೆದಿದ್ದು, ಇದರಲ್ಲಿ ಮಧ್ಯವರ್ತಿಯಾಗಿದ್ದ ಜೇಮ್ಸ್, ಅಗಸ್ಟಾ ವೆಸ್ಟ್‌ಲ್ಯಾಂಡ್‌ನಿಂದ ಸುಮಾರು ₹225 ಕೋಟಿ ಪಡೆದಿದ್ದಾರೆ' ಎನ್ನುವ ಆರೋಪವಿದೆ.