ವಾರಾಣಸಿ: ಧಾರ್ಮಿಕ ಸ್ಥಳಗಳಲ್ಲಿ ಬಳಸುವ ಧ್ವನಿವರ್ಧಕಗಳಿಗೆ ಶಾಶ್ವತ ಶಬ್ದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಕರೆ ನೀಡಿದ್ದಾರೆ.
ಸರ್ಕ್ಯೂಟ್ ಹೌಸ್‌ನಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಹೋಳಿ ಆಚರಣೆಯ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಡಿಜೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು, ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಂತಹ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದನಗಳ ಕಳ್ಳಸಾಗಣೆ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ಆದೇಶಿಸಿದ್ದಾರೆ. ಕಳ್ಳಸಾಗಣೆದಾರರು, ಬಳಸಿದ ವಾಹನದ ಮಾಲೀಕರು ಮತ್ತು ಕೈಜೋಡಿಸುವ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ..
ರಾಜ್ಯದಲ್ಲಿ ಜಾನುವಾರು ಕಳ್ಳಸಾಗಣೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಚರ್ಚೆ ನಡೆಸುವಂತೆ ವಲಯದ ಎಡಿಜಿ ಪಿಯೂಷ್ ಮೊರ್ಡಿಯಾ ಅವರಿಗೆ ನಿರ್ದೇಶಿಸಲಾಯಿತು.