HEALTH TIPS

ಮಂಗಳೂರು- ತಲಪಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿ ನಡೆಯಲಿದೆ.

ಹೀಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್‌ವೆಲ್ ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ.

ಆದ್ದರಿಂದ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾದ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ಸ್ ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರ ಮಾಡದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಉಪಯೋಗಿಸಬಹುದಾದ ಇತರೆ ಮಾರ್ಗಗಳು

*ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವಿಚಕ್ರ ವಾಹನಗಳು ಕೊಣಾಜೆ- ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.

*ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು.

*ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು - ಉಪ್ಪಿನಂಗಡಿ - ಪುತ್ತೂರು - ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು - ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು

*ಬಿ.ಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries