ಕೊಚ್ಚಿ: ಇಡುಕ್ಕಿಯ ಪೀರುಮೇಡು ಗ್ರಾಮದ ಪರುಂತುಂಪರದಲ್ಲಿ ಕಂದಾಯ ಮತ್ತು ಪಂಚಾಯತ್ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಯಾವುದೇ ನಿರ್ಮಾಣ ಕಾರ್ಯಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ಈ ಪ್ರದೇಶದಲ್ಲಿ ಅಕ್ರಮ ಭೂ ಅತಿಕ್ರಮಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ನಂತರ, ನ್ಯಾಯಮೂರ್ತಿ ಅನಿಲ್ ಕೆ. ನರೇಂದ್ರನ್, ನ್ಯಾಯಮೂರ್ತಿ ಎಸ್. ಮುರಳಿ ಕೃಷ್ಣ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಸಂಬಂಧಪಟ್ಟ ಸ್ಥಳೀಯಾಡಳಿತ ಸಂಸ್ಥೆಯಿಂದ ಕಟ್ಟಡ ಅನುಮತಿ ಪಡೆದರೆ ಮಾತ್ರ ಆ ಪ್ರದೇಶದಲ್ಲಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಂದಾಯ, ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.