ನವದೆಹಲಿ: ಗ್ಯಾಂಗ್‌ಸ್ಟರ್ಸ್ ಕಾಯ್ದೆಯಡಿಯಲ್ಲಿ ಬಂಧಿತರಾಗಿದ್ದ ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎನ್.ಕೋಟೀಶ್ವರ್ ಸಿಂಗ್ ನೇತೃತ್ವದ ನ್ಯಾಯಪೀಠವು, 'ನ್ಯಾಯಾಲಯದ ಅನುಮತಿ ಇಲ್ಲದೇ, ಉತ್ತರ ಪ್ರದೇಶ ಬಿಟ್ಟು ತೆರಳುವಂತಿಲ್ಲ.
ನ್ಯಾಯಾಲಯಕ್ಕೆ ಹಾಜರಾಗುವ ಮುನ್ನಾದಿನ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು. ಲಖನೌ ನಿವಾಸದಲ್ಲಿ ತಂಗುವಂತೆ ತಿಳಿಸಿದ್ದು, ಮವೂ ವಿಧಾನಸಭಾ ಕ್ಷೇತ್ರಕ್ಕೆ ತೆರಳುವ ವೇಳೆ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು' ಎಂದು ತಿಳಿಸಿದರು.
2024ರ ಸೆಪ್ಟೆಂಬರ್ 6ರಂದು ಗ್ಯಾಂಗ್‌ಸ್ಟರ್ಸ್ ಕಾಯ್ದೆಯಡಿಯಲ್ಲಿ ಅನ್ಸಾರಿ ಅವರನ್ನು ಬಂಧಿಸಲಾಗಿತ್ತು.
ಅಬ್ಬಾಸ್ ಅನ್ಸಾರಿ ಅವರು ಗ್ಯಾಂಗ್‌ಸ್ಟರ್ ಮುಕ್ತಾರ್ ಅನ್ಸಾರಿ ಮಗ. ಉತ್ತರ ಪ್ರದೇಶದ ಮವೂ ವಿಧಾನಸಭಾ ಕ್ಷೇತ್ರದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಾರೆ.