ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ದತ್ತಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಮಾ.30 ರಂದು ಅಪರಾಹ್ನ 2.30ಕ್ಕೆ ಕೀಕಾನದಲ್ಲಿರುವ' ಧ್ವನಿ 'ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕ ನಂದಿಕೇಶನ್.ಎನ್ ' ಕನ್ನಡಕ್ಕೆ ಹೊಸದುರ್ಗದ ಕೊಡುಗೆ 'ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡುವರು.ಬಳಿಕ ಹೊಸದುರ್ಗದ ಕನ್ನಡಿಗರ ಸಮಸ್ಯೆಗಳ ಕುರಿತು ಸಂವಾದ ನಡೆಯಲಿದೆ. ನಿವೃತ್ತ ಮುಖ್ಯ ಶಿಕ್ಷಕ ಸಿ. ಸುಬ್ರಾಯ, ಬೇಕಲ ಉಪಜಿಲ್ಲಾ ಶಿಕ್ಷಣಾಧಿಕಾರಿ ಅರವಿಂದ.ಕೆ, ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ರಾಜಗೋಪಾಲ.ಕೆ, ಹೊಸದುರ್ಗ ಕನ್ನಡ ಸಂಘದ ಅಧ್ಯಕ್ಷ ಹೆಚ್.ಎಸ್.ಭಟ್ ಮುಖ್ಯ ಅತಿಥಿಗಳಾಗಿರುವರು.
ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ,ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ,ಕಲ್ಲಕಟ್ಟ ಶಾಲಾ ಶಿಕ್ಷಕಿ ನಿರೀಕ್ಷಾ ಉಪಸ್ಥಿತರಿರುವರು.