ವಾಷಿಂಗ್ಟನ್: 'ಅಮೆರಿಕದ ರಾಷ್ಟ್ರೀಯ ಗುಪ್ತಚರ ಸಂಸ್ಥೆಯ ನಿರ್ದೇಶಕಿ (ಡಿಎನ್‌ಐ) ತುಳಸಿ ಗಬಾರ್ಡ್ ಅವರು ಇತ್ತೀಚೆಗೆ ಭಾರತಕ್ಕೆ ನೀಡಿದ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ದಶಕದ ಬಾಂಧವ್ಯವನ್ನು ಎತ್ತಿತೋರಿಸುತ್ತದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವಿನ ಸ್ನೇಹವನ್ನು ಮತ್ತಷ್ಟು ಬಲಪಡಿಸಿದೆ' ಎಂದು ಡಿಎನ್‌ಐ ಪ್ರಕಟಣೆಯಲ್ಲಿ ತಿಳಿಸಿದೆ.
ತುಳಸಿ ಅವರು ಡಿಎನ್‌ಐ ಜವಾಬ್ದಾರಿ ವಹಿಸಿಕೊಂಡ ನಂತರ, ಹವಾಯಿ, ಜಪಾನ್, ಥಾಯ್ಲೆಂಡ್, ಭಾರತ ಹಾಗೂ ಫ್ರಾನ್ಸ್‌ಗೆ ಪ್ರವಾಸ ಕೈಗೊಂಡಿದ್ದಾರೆ.
'ಇಂಡೋ-ಪೆಸಿಫಿಕ್ ಭಾಗದಲ್ಲಿ ಜನಿಸಿ, ನಂತರ ಅಲ್ಲಿಯೇ ಬೆಳೆದ ಗಬಾರ್ಡ್ ಅವರು ಡೊನಾಲ್ಡ್ ಟ್ರಂಪ್ ಅವರ 'ಅಮೆರಿಕ ಮೊದಲು' ನೀತಿಯನ್ನು ಮುನ್ನಡೆಸಲು ಇರುವ ಅವಕಾಶಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧ ವೃದ್ಧಿಯ ಕುರಿತು ಚರ್ಚೆ ನಡೆಸಿದ್ದರು' ಎಂದು ತಿಳಿಸಿದೆ.