ಕಾಸರಗೋಡು: ಬೀದಿನಾಯಿಗಳನ್ನು ರ್ಯಾಬೀಸ್‍ನಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಅವುಗಳಿಗೆ ಚುಚ್ಚುಮದ್ದು ನೀಡುವ ಪ್ರಕ್ರಿಯೆಗೆ ಮಧೂರು ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾದೆ. ಬೀದಿನಾಯಿಗಳನ್ನು ಸೆರೆಹಿಡಿಯುವ ತಜ್ಞರು ಹಾಗೂ ವೆಟರಿನರಿ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಧೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕೂಡ್ಲು, ಗಂಗೆ ಪ್ರದೇಶದ ಬೀದಿನಾಯಿಗಳನ್ನು ಸೆರೆಹಿಡಿದು ಲಸಿಕೆ ಹಾಕುವ ಕಾರ್ಯಕ್ರಮ ನಡೆಸಲಾಯಿತು. ಸ್ಥಳೀಯಾಡಳಿತ ಸಂಸ್ಥೆ ಸಹಯೋಗದೊಂದಿಗೆ ಪಶುಸಂಗೋಪನಾ ಇಲಾಖೆ ಬೀದಿನಾಯಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.