ಇಂಫಾಲ: ಮಣಿಪುರದಲ್ಲಿ ನಾಗಾ ಸಮುದಾಯದ ಆರು ಶಾಸಕರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಮಗೆ ತಿಳಿದಿದ್ದು ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲೆಗಳಲ್ಲಿರುವ ವಿವಿಧ ಶಿಬಿರಗಳಲ್ಲಿ ವಾಸಿಸುತ್ತಿರುವವರ ಸಮಸ್ಯೆಗಳ ಬಗ್ಗೆ ಹಾಗೂ ಸರ್ಕಾರ ರಚನೆ ಕುರಿತಂತೆಯೂ ಅವರು ಚರ್ಚೆ ಮಾಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.