ಬದಿಯಡ್ಕ: ಶ್ರೀಮದೆಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ತಮ್ಮ ಜನ್ಮನಕ್ಷದ ಶುಭದಿನ ಶನಿವಾರದಂದು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಭೇಟಿ ನೀಡಿದರು. ಆಶ್ರಮದ ವತಿಯಿಂದ ಶ್ರೀಗಳನ್ನು ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಗೋವುಗಳಿಗೆ ಗೋಗ್ರಾಸವನ್ನು ನೀಡಿದ ಶ್ರೀಗಳು ಆಶ್ರಮವಾಸಿಗಳ ಯೋಗಕ್ಷೇಮವನ್ನು ವಿಚಾರಿಸಿ ಅವರಿಗೆ ಮಂತ್ರಾಕ್ಷತೆಯನ್ನು ನೀಡಿ ಹರಸಿದರು.
ಆಶ್ರಮದ ಪ್ರಧಾನ ಕಾರ್ಯದರ್ಶಿ ರಮೇಶ ಕಳೇರಿ, ಶ್ರೀಕೃಷ್ಣ ಭಟ್ ಪುದುಕೋಳಿ, ಶಿವಶಂಕರ ಭಟ್ ಗುಣಾಜೆ, ಶಶಿಧರ ಐಎಎಸ್, ಸವಿತಾ ಟೀಚರ್, ಸಮಿತಿಯ ಪದಾಧಿಕಾರಿಗಳು, ಹಿತೈಷಿಗಳು ಉಪಸ್ಥಿತರಿದ್ದರು.