ಬೀಜಿಂಗ್: ಗಡಿ ಸಮಸ್ಯೆಗಳಿಗೆ ಸಂಬಂಧಿಸಿ ನ್ಯಾಯಯುತ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಭಾರತದೊಂದಿಗೆ ಕಾರ್ಯನಿರ್ವಹಿಸಲು ಉತ್ಸುಕವಾಗಿರುವುದಾಗಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ) ಗುರುವಾರ ಹೇಳಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಪಿಎಲ್‌ಎ ವಕ್ತಾರ ಸೀನಿಯರ್ ಕರ್ನಲ್ ವು ಕಿಯಾನ್, 'ಉಭಯ ದೇಶಗಳ ಬಾಂಧವ್ಯ ಸದೃಢ ಹಾಗೂ ಸ್ಥಿರವಾಗಿ ಇರುವುದನ್ನು ಖಾತ್ರಿಪಡಿಸುವುದಕ್ಕಾಗಿ ಕಾರ್ಯ ನಿರ್ವಹಿಸಲು ಸೇನೆ ಸಿದ್ಧವಾಗಿದೆ' ಎಂದು ಹೇಳಿದ್ದಾರೆ.