ಇಂಫಾಲ್: ನಿಷೇಧಿತ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಾರ್ಟಿಯ (ಎಮ್‌ಎಫ್‌ಎಲ್) ಮೂವರು ಸದಸ್ಯರನ್ನು ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.
ಬಂಧಿತರನ್ನು ಅಹೇಬಾಮ್ ಗಾಂಧಿ (35), ಥೊಂಗಮ್ ನೌಬಾ ಮೈಥೇಯಿ (21) ಹಾಗೂ ನಿಂಗ್‌ಥೌಬಾ ಮೊಮೊಚಾ ಸಿಂಗ್ ಎಂದು ಗುರುತಿಸಲಾಗಿದೆ.
ಅಪಹರಣ ಪ್ರಕರಣದಲ್ಲಿ ಇವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಲಿಯಾಂಗ್ ಚಾಜಿಂಗ್ ಮಮಾಂಗ್ ಲೇಕೈನಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಶಸ್ತ್ರಾಸ್ತ್ರ ವಶ: ರಾಜ್ಯದಾದ್ಯಂತ ಹಲವೆಡೆ ಕಾರ್ಯಾಚರಣೆ ನಡೆಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.