ಮುಳ್ಳೆರಿಯ: ತುಳುನಾಡು ಪರಶುರಾಮ ಸೃಷ್ಟಿಯ ಸ್ವರ್ಗ. ಪ್ರಕೃತಿಯ ವಿಸ್ಮಯಗಳು ಒಂದೊಂದು ಕಡೆ ಒಂದೊಂದು ರೀತಿ. ಅದರಲ್ಲೂ ಇಲ್ಲಿನ ಮಹಾಲಿಂಗೇಶ್ವರನ ಸನ್ನಿಧಿಯ ಕಾವೇರಿ ತೀರ್ಥ ನಮಗೆ ಪುಣ್ಯವನ್ನು ಕೊಡಮಾಡುತ್ತದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಮಿಂಚಿಪದವು ಶ್ರೀ ಕಾವೇರಮ್ಮ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಮಂಗಳವಾರ ನಡೆದ ಪ್ರತಿμÁ್ಠ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.
ಹಳೆಯ ಆಚಾರ ವಿಚಾರಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕಾರ್ಯ ಆಗಬೇಕಿದೆ. ಆ ದೃಷ್ಟಿಯಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ. ಶ್ರೀ ಕ್ಷೇತ್ರವು ಜೀರ್ಣೋದ್ಧಾರ ಪ್ರಕ್ರಿಯೆಯಲ್ಲಿದ್ದು ಆದಷ್ಟು ಬೇಗನೆ ಜೀರ್ಣೋದ್ಧಾರ ಕಾಣುವಂತಾಗಲಿ. ನಾವೆಲ್ಲರೂ ಆ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗೋಣ ಎಂದು ಅವರು ಹೇಳಿದರು.
ಸಭಾ ಕಾರ್ಯಕ್ರಮವನ್ನು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಧುಸೂದನ ಆಯರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನ್ಯಾಯವಾದಿ ರಾಮ್ ಪ್ರಸಾದ್ ಶೆಟ್ಟಿ, ಕ್ಷೇತ್ರದ ಕಾರ್ಯಾಧ್ಯಕ್ಷÀ ದಾಮೋದರ ಮಣಿಯಾಣಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮುಕೇಶ್, ಗಡಿನಾಡ ಸಾಹಿತ ಸಾಂಸ್ಕøತಿಕ ಅಕಾಡಮಿ ಅಧ್ಯಕ್ಷ ಚನಿಯಪ್ಪ ನಾಯ್ಕ್, ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ, ರಾಘವ ಎಂ.ಎನ್, ನಾರಾಯಣ ಕೇಕಡ್ಕ, ಚಂದ್ರಶೇಖರ ಎಂ.ಎನ್, ರಾಮಚಂದ್ರ ಎನ್, ಮನೋಜ್ ಎಂ.ಸಿ, ಸದಾನಂದ, ಸೇವಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.