ಮಂಜೇಶ್ವರ : ಮಂಜೇಶ್ವರ ಮತ್ತು ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಯುವತಿಯರು ನಾಪತ್ತೆಯಗಿರುವ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ಠಾಣೆಗಳಲ್ಲಿ ದಾಖಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮಜಿಬೈಲ್ ಶ್ರೀಲಕ್ಷ್ಮೀ ನಿಲಯದ ನಿವ್ಯಶ್ರೀ(20)ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಗುರುಪುರದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳುವುದಾಗಿ ಮನೆಯಿಂದ ಹೊರಟವಳು ವಾಪಸಾಗದಿರುವ ಬಗ್ಗೆ ಯುವತಿ ತಂದೆ ರವಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಬದಿಯಡ್ಕ ಕಾಡಮನೆ ನಿವಾಸಿ, 25ರ ಹರೆಯದ ವಿವಾಹಿತೆ ನಾಪತ್ತೆಯಾಗಿರುವ ಬಗ್ಗೆ ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಾ. 3ರಿಂದ ನಾಪತ್ತೆಯಾಗಿರುವುದಾಗಿ ಆಕೆ ಪತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.