ಶಿಲ್ಲಾಂಗ್: ತನ್ನ ಕಿರಿಯ ಸಹೋದ್ಯೋಗಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೇನೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಮೇಘಾಲಯದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಲ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ರಿಗೇಡಿಯರ್ ಶ್ರೇಣಿಯ ಅಧಿಕಾರಿ ವಿರುದ್ಧ ತನಿಖೆ ನಡೆಸುತ್ತಿರುವುದಾಗಿ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೈಯಮ್ ತಿಳಿಸಿದ್ದಾರೆ.