ಇಂಫಾಲ್: ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ, ಜನರಿಂದ ಸುಲಿಗೆ ಮಾಡುತ್ತಿದ್ದ ಐವರು ಉಗ್ರರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ನಿಷೇಧಿತ ಸಂಘಟನೆಗಳಾದ ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್‌ನ ಇಬ್ಬರು, ಕಾಂಗ್ಲೇಪಾಕ್ ಕಮ್ಯುನಿಸ್ಟ್ ಪಾರ್ಟಿಯ ಇಬ್ಬರು ಹಾಗೂ 'ಎಸ್‌ಒಆರ್‌ಇಪಿಎ' ಸಂಘಟನೆಯ ಒಬ್ಬ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಇಂಫಾಲ್ ಪೂರ್ವದಲ್ಲಿರುವ ಚಿಂಗೇಯಿ ಚಿಂಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮಂಗಳವಾರ ಶೋಧ ಕಾರ್ಯಚರಣೆ ನಡೆಸಿದ್ದು, ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.