ಮಾಸ್ಕೊ: ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಒಪ್ಪಿಕೊಂಡಿದ್ದು, ಅದಕ್ಕಾಗಿ ತಯಾರಿ ನಡೆಯುತ್ತಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಗುರುವಾರ ಹೇಳಿದ್ದಾರೆ.
ರಷ್ಯಾದ ಅಂತರರಾಷ್ಟ್ರೀಯ ವ್ಯವಹಾರಗಳ ಕೌನ್ಸಿಲ್ ಆಯೋಜಿಸಿದ್ದ 'ರಷ್ಯಾ-ಭಾರತ: ಹೊಸ ದ್ವಿಪಕ್ಷೀಯ ಕಾರ್ಯಸೂಚಿಯತ್ತ' ಎನ್ನುವ ಸಮ್ಮೇಳನದಲ್ಲಿ ಮಾತನಾಡಿರುವ ಲಾವ್ರೋವ್ 'ಪುಟಿನ್ ಭಾರತಕ್ಕೆ ಭೇಟಿ ನೀಡುವ ಸಲುವಾಗಿ ತಯಾರಿಯನ್ನು ನಡೆಸಲಾಗುತ್ತಿದೆ' ಎಂದು ಹೇಳಿದ್ದಾರೆ.
'ನರೇಂದ್ರ ಮೋದಿಯವರು ಎರಡನೇ ಬಾರಿ ಪ್ರಧಾನಿಯಾದ ಮೇಲೆ ಮೊದಲು ರಷ್ಯಾಕ್ಕೆ ಆಗಮಿಸಿದ್ದರು. ಈಗ ನಮ್ಮ ಸರದಿ' ಎಂದಿದ್ದಾರೆ.
ಆದರೆ ಯಾವಾಗ ಪುಟಿನ್ ಭಾರತಕ್ಕೆ ತೆರಳಲಿದ್ದಾರೆ ಎನ್ನುವ ದಿನಾಂಕವನ್ನು ಬಹಿರಂಗಪಡಿಸಿಲ್ಲ.
2024ರ ಜುಲೈನಲ್ಲಿ ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದರು. ಐದು ವರ್ಷಗಳಲ್ಲಿ ಮೋದಿಯವರ ಮೊದಲ ಭೇಟಿ ಇದಾಗಿತ್ತು. ಭೇಟಿಯ ವೇಳೆ ಪುಟಿನ್ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು.