ವಯನಾಡ್: ಸಂಸತ್ತಿನಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ, ಚರ್ಚೆಗಳನ್ನು ತಡೆಯುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ.
ವಯನಾಡ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೇಗಾದರೂ ಸರಿಯೇ ಚರ್ಚೆಯನ್ನು ತಡೆಯಬೇಕು ಎನ್ನುವ ರೀತಿ ಸರ್ಕಾರದ ವರ್ತನೆ ಇದೆ.
ಇದಕ್ಕಾಗಿ ವಿವಿಧ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ, 'ಸಂಸತ್ತಿನಲ್ಲಿ ಚರ್ಚೆ ಮಾಡುವುದನ್ನು ಸರ್ಕಾರ ತಡೆಯುತ್ತಿದೆ' ಎಂದು ಹೇಳಿದ್ದಾರೆ.
ಇದಕ್ಕಾಗಿ ವಿವಿಧ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.
ಏನಾದರೂ ಮಾಡಿ ಚರ್ಚೆಯನ್ನು ತಪ್ಪಿಸುವುದು ಅವರ ಉದ್ದೇಶ. ವಿರೋಧ ಪಕ್ಷಗಳು ಪ್ರತಿಭಟಿಸಲು ಹೊರಟಿದೆ ಎಂದು ಅವರು ಭಾವಿಸುವ ಯಾವುದನ್ನಾದರೂ ಕೈಗೆತ್ತಿಕೊಳ್ಳುವುದರ ಮೂಲಕ ಅಥವಾ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನಿರಾಕರಿಸುವುದರ ಮೂಲಕ ಅವರು ಅದನ್ನು ಸಾಧಿಸುತ್ತಿದ್ದಾರೆ' ಎಂದು ಪ್ರಿಯಾಂಕಾ ಹೇಳಿದ್ದಾರೆ.
ಸಂಸತ್ತಿನಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸದಂತೆ ಕೇಂದ್ರವು ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದ ಅವರು, ಅದಕ್ಕೆಲ್ಲಾ ಸಂಸದರು ಸಾಕ್ಷಿಯಾಗುತ್ತಿರುವುದು ತುಂಬಾ ದುಃಖಕರ ಎಂದು ಬೇಸರಿಸಿದ್ದಾರೆ.
'ವಿರೋಧ ಪಕ್ಷಗಳು ಸಂಸತ್ತನ್ನು ಹಾಳು ಮಾಡುತ್ತಿವೆ ಎಂದು ಪದೇ ಪದೇ ಆರೋಪಿಸಲಾಗುತ್ತಿದೆ. ಆದರೆ ಸರ್ಕಾರವೇ ಕಲಾಪವನ್ನು ಹಾಳುಗೆಡವುತ್ತಿದೆ. ಬಹುಶಃ ಇದೆಲ್ಲಾ ಮೊದಲ ಬಾರಿಗೆ ನಡೆಯುತ್ತಿದೆ' ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ, ಪ್ರಿಯಾಂಕಾ ಗಾಂಧಿ ಕಲ್ಪೆಟ್ಟಾದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಭಾಗವಹಿಸಿದ್ದರು.