ನವದೆಹಲಿ: ಹಿರಿಯ ವಕೀಲ ರಿಷಿ ಮಲ್ಹೋತ್ರಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಅವರ ನೇಮಕಾತಿಯನ್ನು ರದ್ದುಮಾಡಬಾರದೇಕೆ ಎಂದು ಪ್ರಶ್ನಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಮಲ್ಹೋತ್ರಾ ಅವರ ವಿರುದ್ಧ ದುರ್ನಡತೆ ಆರೋಪಗಳು ಕೇಳಿಬಂದ ಬೆನ್ನಲ್ಲೇ, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಮೂರ್ತಿಗಳು ಅವಿರೋಧವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಕೈದಿಗಳ ಅವಧಿಪೂರ್ವ ಬಿಡುಗಡೆ ಪ್ರಕರಣಗಳಲ್ಲಿ ವಾಸ್ತವಾಂಶವನ್ನು ಮುಚ್ಚಿಟ್ಟ ಮತ್ತು ದಾರಿ ತಪ್ಪಿಸುವ ಹೇಳಿಕೆ ನೀಡಿದ ಆರೋಪ ಮಲ್ಹೋತ್ರಾ ಅವರ ಮೇಲಿದೆ.