ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ TASMACನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪಕ್ಷ ಪ್ರತಿಭಟನೆ ಆಯೋಜಿಸಿದ್ದ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸೇರಿಂದತೆ ಅನೇಕ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.
TASMACನಲ್ಲಿ ₹1 ಸಾವಿರ ಕೋಟಿಯ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ಹೀಗಾಗಿ TASMACನ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿತ್ತು.
ಕಪ್ಪು ಶರ್ಟ್ ಧರಿಸಿದ್ದ ಅಣ್ಣಾಮಲೈ ಅವರನ್ನು ಅವರ ಮನೆಯ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳಾ ಮೋರ್ಚಾದ ಅಧ್ಯಕ್ಷೆ ಹಾಗೂ ಕೊಯಮತ್ತೂರು ದಕ್ಷಿಣ ಶಾಸಕಿ ವನತಿ ಶ್ರೀನಿವಾಸನ್, ವಿನೋಜ್ ಪಿ ಸೆಲ್ವಂ ಮತ್ತು ಅಮರ್ ಪ್ರಸಾದ್ ರೆಡ್ಡಿಯವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಮಿಳಿಸೈ ಸೌಂದರರಾಜನ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಅಣ್ಣಾಮಲೈ ಎಕ್ಸ್ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.