HEALTH TIPS

ದಾರಿ ತಪ್ಪಿಸುವ ಜಾಹೀರಾತು: ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಜನರನ್ನು ದಾರಿ ತಪ್ಪಿಸುವ ಮೂಲಕ ಸಮಾಜಕ್ಕೆ ಭಾರಿ ಹಾನಿಯನ್ನುಂಟು ಮಾಡಬಲ್ಲ ಜಾಹೀರಾತುಗಳ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರಗಳು ಕುಂದು-ಕೊರತೆ ನಿವಾರಣಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಸುಪ್ರೀಂ ಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ ಹಾಗೂ ಉಜ್ವಲ್‌ ಭುಯಾನ್‌ ಅವರಿದ್ದ ಪೀಠವು, 'ಡ್ರಗ್ಸ್‌ ಹಾಗೂ ಮ್ಯಾಜಿಕ್‌ ರೆಮಿಡೀಸ್‌ ಕಾಯ್ದೆಯನ್ನು ಉಲ್ಲಂಘಿಸಿದ ಜಾಹೀರಾತುಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಲು ಕುಂದು-ಕೊರತೆ ವ್ಯವಸ್ಥೆ ಅಗತ್ಯವಾಗಿದೆ. ಹಾಗಾಗಿ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು 2 ತಿಂಗಳ ಮಿತಿಯೊಳಗೆ ಈ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಈ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮವನ್ನೂ ಕೈಗೊಳ್ಳಬೇಕು' ಎಂದು ಹೇಳಿದೆ.ಡ್ರಗ್ಸ್‌ ಹಾಗೂ ಮ್ಯಾಜಿಕ್‌ ರೆಮಿಡೀಸ್‌ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಪೊಲೀಸ್‌ ವ್ಯವಸ್ಥೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆಯೂ ಪೀಠ ಸೂಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries