ದಂತೇವಾಡ: ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿತು.
ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಸ್ಥಳದಿಂದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಲ್ಲಿ ಇನ್ನೂ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಾರ್ಚ್ 20ರಂದು ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 30 ನಕ್ಸಲರನ್ನು ಹೊಡೆದುರುಳಿಸಿದ್ದವು.