ಅಧಿಕೃತ ಮೂಲಗಳ ಪ್ರಕಾರ, ರಾತ್ರಿ1 ಗಂಟೆ ಸುಮಾರಿಗೆ, ಘಗ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್ ಕೇಂದ್ರ ಗಡಿಯ ಬಳಿ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ, ಭದ್ರತಾ ಪಡೆ ಸಿಬ್ಬಂದಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬಿಎಸ್‌ಎಫ್ ಡಿಐಜಿ ಸೇರಿದಂತೆ ಹಿರಿಯ ಬಿಎಸ್‌ಎಫ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.