ಮಂಜೇಶ್ವರ: ಇಲ್ಲಿಯ ಶ್ರೀ ಕೀರ್ತೇಶ್ವರ ಸದಾಶಿವ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬಹ್ಮಕಲಶೋತ್ಸವದ ವೈದಿಕ ಕಾರ್ಯಕ್ರಮಕ್ಕೆ ಶನಿವಾರ ಬೆಳಗ್ಗೆ ಕ್ಷೇತ್ರದಲ್ಲಿ ವೈದಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ತಂತ್ರಿವರೇಣ್ಯರ ಹಾಗೂ ಋತ್ವಿಜರ ಆಗಮನ, ಪೂರ್ಣ ಕುಂಭ ಸ್ವಾಗತ, ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹ ವಾಚನ, ಗಣಪತಿ ಹೋಮ, ಬ್ರಹ್ಮಕೂರ್ಚಾ ಹೋಮ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಅಂಕುರ ಪೂಜೆ, ಅರಣೆ ಮಥನ, ಅಗ್ನಿ ಜನನ, ಸಪ್ತ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ಪ್ರಕಾರ ಬಲಿ, ರಾತ್ರಿ ಪೂಜೆ, ಅನ್ನಸಂತರ್ಪಣೆ ನಡೆಯಿತು.