ಪೆರ್ಲ: ಪೆರ್ಲ ನಾಲಂದ ಕಾಲೇಜು, ನಾಲಂದ ಚಾರಿಟೇಬಲ್ ಟ್ರಸ್ಟ್ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ "ಎನ್ನ ಪೆÇವ್ವಲ್ಲೇ 2ಕೆ25" ಬೀಳ್ಕೊಡುಗೆ ಸಮಾರಂಭ ಮಂಗಳವಾರ ನಡೆಯಿತು.
ಕಾಲೇಜು ಆಡಳಿತ ಮಂಡಳಿ ಸದಸ್ಯ ರಾಜಶೇಖರ ಪೆರ್ಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಯ ಜೀವನದಲ್ಲಿ ಸಂಸ್ಕಾರಯುತ ಶಿಕ್ಷಣಕ್ಕಾಗಿ ಗುರು ಮತ್ತು ವಿದ್ಯಾ ಸಂಸ್ಥೆ ಪ್ರಧಾನ ಪಾತ್ರ ವಹಿಸುತ್ತದೆ. ಗುರುವಿನ ಮಾರ್ಗದರ್ಶನ ವಿದ್ಯಾರ್ಥಿಯ ಜೀವನದ ದಾರಿದೀಪವಾಗುವುದು ಎಂದರು. ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ನಾಲಂದ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಂತಿಮ ಪದವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.
ವಿದ್ಯಾರ್ಥಿನಿಯರಾದ ಶ್ರೀಲಕ್ಷ್ಮೀ ಸ್ವಾಗತಿಸಿ, ಪ್ರಾರ್ಥನಾ ಭಾರದ್ವಾಜ್ ವಂದಿಸಿದರು. ವಿದ್ಯಾರ್ಥಿನಿ ಝಿನಾನ ನಿರೂಪಿಸಿದರು. ಔಪಚಾರಿಕ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.