ಭೋಪಾಲ್: 'ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಕಾನೂನನ್ನು ಮಧ್ಯಪ್ರದೇಶದಲ್ಲಿ ಜಾರಿಗೊಳಿಸುವ ಯೋಚನೆ ಇದೆ. ಹೆಣ್ಣುಮಕ್ಕಳನ್ನು ಮತಾಂತರ ಮಾಡುವವರಿಗೂ ಇದೇ ಶಿಕ್ಷೆ ವಿಧಿಸುವ ಬಗ್ಗೆ ಯೋಜಿಸಲಾಗುತ್ತಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಶನಿವಾರ ಹೇಳಿದ್ದಾರೆ.
'ಹೆಣ್ಣುಮಕ್ಕಳ ರಕ್ಷಣೆ ಹಾಗೂ ಆತ್ಮಗೌರವವನ್ನು ಕಾಪಾಡಿಕೊಳ್ಳುವ ಬದ್ಧತೆ ಮಧ್ಯಪ್ರದೇಶ ಸರ್ಕಾರಕ್ಕಿದೆ. ಹಾಗಾಗಿ, ಹೆಣ್ಣುಮಕ್ಕಳನ್ನು ಕಾನೂನುಬಾಹಿರವಾಗಿ ಮತಾಂತರ ಮಾಡುವವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು, ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು' ಎಂದು ಯಾದವ್ ಅವರು 'ಎಕ್ಸ್'ನಲ್ಲಿ ಶನಿವಾರ ತಿಳಿಸಿದ್ದಾರೆ.