ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವಾಗ ಹಣದ ರಾಶಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆಂತರಿಕ ತನಿಖೆಯನ್ನು ಪ್ರಾರಂಭಿಸಿದೆ.
ಬಾರ್ ಅಂಡ್ ಬೆಂಚ್‌ನಲ್ಲಿನ ವರದಿಯ ಪ್ರಕಾರ, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದ ಸುಪ್ರೀಂ ಕೋರ್ಟ್ ಸತ್ಯಶೋಧನಾ ವರದಿಯನ್ನುವರದಿಯನ್ನು ಕೋರಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಸಂಜೆ ಸಭೆ ಸೇರಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿತ್ತು.
ಪ್ರಕರಣ ಕುರಿತಂತೆ ಸಿಜೆಐ ವಿವರಣೆ ನಂತರ ಕೊಲಿಜಿಯಂ ಸದಸ್ಯರು ನ್ಯಾಯಮೂರ್ತಿ ವರ್ಮಾ ಅವರನ್ನು ವರ್ಗಾಯಿಸಲು ನಿರ್ಧರಿಸಿದರು.
ಕೊಲಿಜಿಯಂನ ಶಿಫಾರಸನ್ನು ಕೇಂದ್ರ ಸರ್ಕಾರ ಅಂಗೀಕರಿಸಿದ ನಂತರ ನ್ಯಾಯಮೂರ್ತಿ ವರ್ಮಾ ಅವರ ಪ್ರಸ್ತಾವಿತ ವರ್ಗಾವಣೆ ಜಾರಿಗೆ ಬರಬಹುದು.
ಅಗತ್ಯವಿದ್ದರೆ ಕೊಲಿಜಿಯಂ ಮುಂದಿನ ಕ್ರಮಗಳನ್ನು ಸಹ ತೆಗೆದುಕೊಳ್ಳಬಹುದು.
ಸಂಬಂಧಿತ ಬೆಳವಣಿಗೆಯಲ್ಲಿ, ದೆಹಲಿ ಹೈಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾದ ವರ್ಮಾ ಅವರು ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.