HEALTH TIPS

ಪ್ರಜಾಸತ್ತಾತ್ಮಕ ಸ್ವಾತಂತ್ರ್ಯದ ದುರುಪಯೋಗ: S Jaishankar ಭೇಟಿ ವೇಳೆ ಭದ್ರತೆ ಉಲ್ಲಂಘನೆಗೆ MEA ಖಂಡನೆ

ನವದೆಹಲಿ: ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಭದ್ರತೆಯನ್ನು ಖಲಿಸ್ತಾನಿ ಬೆಂಬಲಿಗರು ಉಲ್ಲಂಘಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತ, ಇಂಗ್ಲೆಂಡ್ ತನ್ನ ರಾಜತಾಂತ್ರಿಕ ಬಾಧ್ಯತೆಗಳನ್ನು ಪೂರೈಸಬೇಕೆಂದು ಭಾರತ ನಿರೀಕ್ಷಿಸುತ್ತದೆ ಎಂದು ಹೇಳಿದೆ.

ವಿದೇಶಾಂಗ ಸಚಿವರು ಇಂಗ್ಲೆಂಡಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತೆ ಉಲ್ಲಂಘನೆಯಾಗಿರುವುದನ್ನು ನಾವು ನೋಡಿದ್ದೇವೆ. ಪ್ರತ್ಯೇಕತಾವಾದಿಗಳು ಮತ್ತು ಉಗ್ರಗಾಮಿಗಳ ಇಂತಹ ಪ್ರಚೋದನಕಾರಿ ಚಟುವಟಿಕೆಗಳನ್ನು ನಾವು ಖಂಡಿಸುತ್ತೇವೆ. ಇಂತಹ ಅಂಶಗಳಿಂದ ಪ್ರಜಾಸತ್ತಾತ್ಮಕ ಸ್ವಾತಂತ್ರ್ಯಗಳ ದುರುಪಯೋಗವಾಗುವುದನ್ನು ನಾವು ಖಂಡಿಸುತ್ತೇವೆ. ಇಂತಹ ಸಂದರ್ಭಗಳಲ್ಲಿ ಆತಿಥೇಯ ಸರ್ಕಾರವು ತಮ್ಮ ರಾಜತಾಂತ್ರಿಕ ಬಾಧ್ಯತೆಗಳನ್ನು ಸಂಪೂರ್ಣವಾಗಿ ಪಾಲಿಸಬೇಕೆಂದು ನಾವು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಲಂಡನ್‌ನ ಚಾಥಮ್ ಹೌಸ್‌ನಲ್ಲಿ ಸಂವಾದ ಕಾರ್ಯಕ್ರಮ ಮುಗಿಸಿ ಜೈಶಂಕರ್ ಅವರು ತೆರಳುತ್ತಿದ್ದ ವೇಳೆ ಅವರಿಗೆ ಅಡ್ಡಿಪಡಿಸಲು ಖಲಿಸ್ತಾನ ಪರ ಉಗ್ರಗಾಮಿಗಳ ಗುಂಪೊಂದು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೊಗಳಲ್ಲಿ, ಜೈಶಂಕರ್ ಅವರ ಬೆಂಗಾವಲು ಪಡೆಯ ಕಡೆಗೆ ವ್ಯಕ್ತಿಯೊಬ್ಬ ಆಕ್ರಮಣಕಾರಿಯಾಗಿ ದಾಳಿ ಮಾಡುವುದನ್ನು ಕಾಣಬಹುದು. ಪ್ರತಿಭಟನಾಕಾರರು ಬೆಂಗಾವಲು ಪಡೆಯ ಮುಂದೆ ತ್ರಿವರ್ಣ ಧ್ವಜವನ್ನು ಹರಿದು ಹಾಕಿದರೆ, ಗುಂಪಿನಲ್ಲಿರುವ ಇತರರು ದೂರದಿಂದ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಜೈಶಂಕರ್ ಅವರು ಸಂವಾದದಲ್ಲಿ ತೊಡಗಿದ್ದ ಸ್ಥಳದ ಹೊರಗೆ ಖಲಿಸ್ತಾನಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವುದನ್ನು ತೋರಿಸುವ ಮತ್ತೊಂದು ವೀಡಿಯೊ ಹೊರಬಿದ್ದಿದೆ. ಪ್ರತಿಭಟನಾಕಾರರು ಧ್ವಜಗಳನ್ನು ಬೀಸುತ್ತಾ ಖಲಿಸ್ತಾನಿ ಪರ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು.

ಇದಕ್ಕೂ ಮೊದಲು, ವಿದೇಶಾಂಗ ಸಚಿವ ಜೈಶಂಕರ್ ಯುಕೆಯ ಗೃಹ ಕಾರ್ಯದರ್ಶಿ ಯೆವೆಟ್ ಕೂಪರ್ ಅವರೊಂದಿಗೆ ಕಳ್ಳಸಾಗಣೆ ಮತ್ತು ಉಗ್ರವಾದದಂತಹ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು. ಇಂಗ್ಲೆಂಡಿನಲ್ಲಿ ಖಲಿಸ್ತಾನ್ ಪ್ರತ್ಯೇಕತಾವಾದಿಗಳ ಚಟುವಟಿಕೆಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಭಾರತವು ಬ್ರಿಟಿಷ್ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಪದೇ ಪದೇ ಎತ್ತಿದೆ.

ಸಭೆಯ ನಂತರ, ಜೈಶಂಕರ್ ಅವರು ಎಕ್ಸ್ ಖಾತೆಯಲ್ಲಿ, ಎರಡೂ ದೇಶಗಳಲ್ಲಿನ ಪ್ರತಿಭಾವಂತ ಜನರ ಹರಿವು, ಜನರಿಂದ ಜನರಿಗೆ ವಿನಿಮಯ ಮತ್ತು ಕಳ್ಳಸಾಗಣೆ ಮತ್ತು ಉಗ್ರವಾದವನ್ನು ಮಟ್ಟಹಾಕುವಲ್ಲಿ ಜಂಟಿ ಪ್ರಯತ್ನಗಳ ಬಗ್ಗೆ ಚರ್ಚಿಸಿದೆವು ಎಂದು ಬರೆದುಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries