ಉಪ್ಪಳ: ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ 2024-25 ನೇ ಸಾಲಿನ ವಿದ್ಯಾರ್ಥಿ ಸಂಭ್ರಮವು ( 20ನೇ ವಾರ್ಷಿಕೋತ್ಸವ) ಏ. 07 ರಂದು ಸೋಮವಾರ ವಿದ್ಯಾಪೀಠದಲ್ಲಿ ನಡೆಯಲಿರುವುದು. ಆ ದಿನ ಬೆಳಿಗ್ಗೆ 9.30 ಕ್ಕೆ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ದ್ವಜಾರೋಹಣ ನಿರ್ವಹಿಸುವರು. ಬಳಿಕ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಟ್ರಸ್ಟಿ ಮೋಹನ್ ದಾಸ್ ಕೊಂಡೆವೂರು ಭಾಗವಹಿಸಲಿರುವರು. ವಿದ್ಯಾಪೀಠದ ಮಾತೃಸಮಿತಿಯ ಅಧ್ಯಕ್ಷೆ ಪ್ರೇಮ , ಶಿಶುವಾಟಿಕಾ ಸಮಿತಿಯ ಅಧ್ಯಕ್ಷ ರಾಕೇಶ್ , ಶಿಶುವಾಟಿಕಾ ಮಾತೃ ಸಮಿತಿಯ ಅಧ್ಯಕ್ಷೆ ಮಾಲತಿ ದೇವಿ ಕಾರ್ಯಕ್ರಮಕ್ಕೆ ಶುಭ ಹಾರೈಸುವರು. ಈ ಸಂದರ್ಭದಲ್ಲಿ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಗುವುದು. ಮಧ್ಯಾಹ್ನ ನಂತರ 2.30 ರಿಂದ 5.00 ರ ತನಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿರುವುದು. ಸಂಜೆ 5. ರಿಂದ 6.30 ರ ತನಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿದ್ಯಾಪೀಠದ ಸಂಸ್ಥಾಪಕ ಆಡಳಿತ ಸಮಿತಿ ಅಧ್ಯಕ್ಷ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚಿಸಲಿರುವರು. ವಿದ್ಯಾಪೀಠದ ಕಟ್ಟಡ ನಿರ್ಮಿಸಿಕೊಟ್ಟ ಹಾಗೂ ಟ್ರಸ್ಟಿಗಳಾದ ಮಹಾಬಲೇಶ್ವರ ಭಟ್ ಎಡಕ್ಕಾನ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮೋನಪ್ಪ ಭಂಡಾರಿ, ಉದ್ಯಮಿ ಶ್ರೀಧರ ಶೆಟ್ಟಿ ಮುಟ್ಟ, ನಿವೃತ್ತ ಪ್ರಾಧ್ಯಾಪಕಿ ಪೆÇ್ರ.ಪ್ರಮೀಳಾ ಮಾಧವ್, ಟ್ರಸ್ಟಿ ಶಶಿಧರ ಶೆಟ್ಟಿ ಗ್ರಾಮಚಾವಡಿ, ಸಾಧನಾ ಮಹಾಬಲೇಶ್ವರ ಭಟ್ ಎಡಕ್ಕಾನ ಭಾಗವಹಿಸಲಿರುವರು. ಮಕ್ಕಳಿಗೆ ಪ್ರತಿಭಾ ಪುರಸ್ಕಾರಗಳನ್ನು ನೀಡಲಾಗುವುದು. ಸಂಜೆ 6.30 ರಿಂದ ಸಾಂಸ್ಕøತಿಕ ಕಾರ್ಯಕ್ರಮ ಮುಂದುವರಿಯಲಿದೆ ಎಂದು ವಿದ್ಯಾಪೀಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.