HEALTH TIPS

ಜನವರಿಯಿಂದ 682 ಭಾರತೀಯರು ಅಮೆರಿಕದಿಂದ ಗಡೀಪಾರು: ಎಂಇಎ

ನವದೆಹಲಿ: ಜನವರಿಯಿಂದ ಈವರೆಗೆ 682 ಭಾರತೀಯರನ್ನು ಅಮರಿಕದಿಂದ ಗಡೀಪಾರು ಮಾಡಲಾಗಿದೆ. ಆ ಪೈಕಿ ಬಹುತೇಕರು ಅಕ್ರಮವಾಗಿ ಅಮೆರಿಕ ಪ್ರವೇಶಕ್ಕೆ ಪ್ರಯತ್ನಿಸಿದವರೇ ಆಗಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ.

ಈ ಕುರಿತಂತೆ ಲೋಕಸಭೆಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ದಾಖಲೆ ರಹಿತವಾಗಿ ಅಮೆರಿಕ ಪ್ರವೇಶಕ್ಕೆ ಯತ್ನಿಸಿ ಗಡೀಪಾರಾದವರಿಗೆ ಕಾನೂನು ಸೇರಿದಂತೆ ಇತರೆ ನೆರವನ್ನು ನೀಡಲಾಗಿದೆ ಎಂದೂ ತಿಳಿಸಿದ್ದಾರೆ.

'ಗಡೀಪಾರಾದ ಭಾರತೀಯರ ಪೈಕಿ ಬಹುತೇಕರು ಅಕ್ರಮವಾಗಿ ಅಮೆರಿಕ ಪ್ರವೇಶಕ್ಕೆ ಯತ್ನಿಸಿದವರು. ಅವರನ್ನು ಅಮೆರಿಕ ಗಡಿಯಲ್ಲಿ ಬಂಧಿಸಿ ಭಾರತಕ್ಕೆ ಗಡೀಪಾರು ಮಾಡಲಾಗಿದೆ.' ಎಂದು ತಿಳಿಸಿದ್ದಾರೆ.

ಅಮೆರಿಕಕ್ಕೆ ವಿದ್ಯಾರ್ಥಿಗಳು ಮತ್ತು ವೃತ್ತಿಪರರ ಸಂಚಾರವನ್ನು ಸುಗಮಗೊಳಿಸಲು ಹಾಗೂ ಅಲ್ಪಾವಧಿಯ ಪ್ರವಾಸಿ ಮತ್ತು ವ್ಯಾಪಾರ ಪ್ರಯಾಣವನ್ನು ಸುಗಮಗೊಳಿಸಲು ಪರಸ್ಪರ ಅನುಕೂಲಕರ, ಸುರಕ್ಷಿತ ಚಲನಶೀಲತೆಯನ್ನು ಉತ್ತೇಜಿಸಲು ಸರ್ಕಾರವು ಅಮೆರಿಕದೊಂದಿಗೆ ತೊಡಗಿಸಿಕೊಂಡಿದೆ ಎಂದೂ ತಿಳಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾನವ ಕಳ್ಳಸಾಗಣೆಯ ಸಮಸ್ಯೆಗಳನ್ನು ಅಕ್ರಮ ಜಾಲಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪರಿಹರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

'ಅಕ್ರಮವಾಗಿ ಅಮೆರಿಕಕ್ಕೆ ಪ್ರವೇಶಿಸಿರುವುದು, ಅಥವಾ ವೀಸಾ ಮಾನ್ಯತೆಯ ಅವಧಿ ಮೀರಿ ಉಳಿದಿರುವುದು, ಅಥವಾ ಯಾವುದೇ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ವಾಸಿಸುತ್ತಿರುವುದು ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾದ ವ್ಯಕ್ತಿಗಳನ್ನು ಗಡೀಪಾರು ಮಾಡುವ ಎಲ್ಲ ಸಂದರ್ಭಗಳಲ್ಲಿ ಭಾರತ ಸರ್ಕಾರವು ಅಮೆರಿಕ ಸರ್ಕಾರದೊಂದಿಗೆ ನಿಕಟ ಸಮನ್ವಯದಲ್ಲಿ ಕೆಲಸ ಮಾಡುವುದನ್ನು ಮುಂದುವರೆಸಿದೆ' ಎಂದು ಹೇಳಿದ್ದಾರೆ.

ಅಮೆರಿಕ ಕಡೆಯಿಂದ ಗಡೀಪಾರು ಮಾಡಲು ಗುರುತಿಸಲಾದ ವ್ಯಕ್ತಿಗಳ ಪಟ್ಟಿಯನ್ನು ಭಾರತ ಸರ್ಕಾರದ ಸಂಬಂಧಿತ ಸಂಸ್ಥೆಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತವೆ. ಭಾರತೀಯ ಪ್ರಜೆಗಳೆಂದು ದೃಢೀಕರಿಸಲ್ಪಟ್ಟ ವ್ಯಕ್ತಿಗಳನ್ನು ಮಾತ್ರ ಭಾರತಕ್ಕೆ ಗಡೀಪಾರು ಮಾಡಲು ಒಪ್ಪಿಕೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries