ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಛತ್ತೀಸಗಢ ಸಶಸ್ತ್ರ ಪಡೆ (ಸಿಎಎಫ್)ಯ ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೊಯ್ನಾರ್‌ನಿಂದ ಫರ್ಸೆಘರ್‌ವರೆಗೆ ನಿರ್ಮಿಸಲಾಗುತ್ತಿರುವ ರಸ್ತೆ ನಿರ್ಮಾಣ ಕಾರ್ಯಕ್ಕೆ ಭದ್ರತೆ ಒದಗಿಸಲು ಸಿಎಎಫ್ ತಂಡ ಗಸ್ತು ತಿರುಗುತ್ತಿದ್ಧ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಿಎಎಫ್‌ನ 19ನೇ ಬೆಟಾಲಿಯನ್‌ಗೆ ಸೇರಿದ ಕಾನ್‌ಸ್ಟೆಬಲ್ ಮನೋಜ್ ಪೂಜಾರಿ (26) ಅವರು ಐಇಡಿ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.