ಕಾಸರಗೋಡು : ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ(ರಿ ),ಕನ್ನಡ ಗ್ರಾಮ ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆ ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ರಜತ ಮಹೋತ್ಸವ ಮತ್ತು ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನದ ಸಂದರ್ಭ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.
ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸಂಸ್ಥಾಪಕ- ಪ್ರದಾನ ಸಂಚಾಲಕ ಡಾ. ಎಂ. ಜಿ. ಆರ್. ಅರಸ್ ಮೈಸೂರು, ವಿ. ಕೆ. ಎಂ. ಕಲಾವಿದರು (ರಿ ),ಬೆಂಗಳೂರು ಇದರ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಹಿರಿಯ ರಂಗಕಲಾವಿದ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ಸಿ.ಎಂ. ತಿಮ್ಮಯ್ಯ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಿರಿಯ ಪತ್ರಕರ್ತ ಎಲ್. ಎಸ್.ಶಾಸ್ತ್ರಿ ಬೆಳಗಾವಿ ಅವರಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು ಇದರ ಪ್ರತಿಷ್ಠಿತ ಜೀವಮಾನ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ, ಸ್ಮರಣಿಕೆ, ಶಾಲು, ಹಾರ ಮತ್ತು ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವರ ಭಾವಚಿತ್ರವನ್ನು ನೀಡಿ ಅಭಿನಂದಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಡಾ.ಕೆ.ಸಿ.ಬಲ್ಲಾಳ್ ಬೆಂಗಳೂರು, ದಯಾಸಾಗರ ಚೌಟ ಮುಂಬಯಿ, ಡಾ. ಕೆ.ಎನ್ ವೆಂಕಟ್ರಮಣ ಹೊಳ್ಳ, ಅಶೋಕ ಜಿ. ಮಳಗಳಿ ಬೆಳಗಾವಿ, ಆನಂದ ಪುರಾಣಿಕ ಬೆಳಗಾವಿ, ಚಂದ್ರಶೇಖರ ನವಲಗುಂದ ಬೆಳಗಾವಿ ಮೊದಲಾದವರು ಉಪಸ್ಥಿತರಿದ್ದರು.