ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
2014ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ( ಐಎಫ್‌ಎಸ್ ) ಅಧಿಕಾರಿಯಾಗಿರುವ ನಿಧಿ ತಿವಾರಿ ಅವರು, ಪ್ರಸ್ತುತ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.