ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ನಡೆಯಲಿರುವ ವಾರ್ಷಿಕ ಕಾರ್ಯಕ್ರಮ ಹಾಗೂ ಶಿವಾರ್ಪಣಂ ಬಿಡುಗಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವ ಮಾರ್ಗದರ್ಶಕ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರನ್ನು ಮಂಗಳವಾರ ಭೇಟಿಯಾಗಿ ವಾರ್ಷಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿ ಆಶೀರ್ವಾದ ಪಡೆಯಲಾಯಿತು.
ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಪೂಜ್ಯ ಶ್ರೀಗಳು ಮಾಹಿತಿ ಪಡೆದುಕೊಂಡರು. ಮೊಕ್ತೇಸರ ಜಗನ್ನಾಥ ರೈ ಪೆರಡಾಲ ಗುತ್ತು, ಜೀರ್ಣೋದ್ದಾರ ಸಮಿತಿ ಕೋಶಾಧಿಕಾರಿ ಸೂರ್ಯ ನಾರಾಯಣ ಎಂ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳಾದ ಗಣೇಶ್ ಪ್ರಸಾದ್ ಕಡ್ಡಪ್ಪು, ಭಾಸ್ಕರ ಪಂಜಿತ್ತಡ್ಕ ಉಪಸ್ಥಿತರಿದ್ದರು.