ನ್ಯೂಯಾರ್ಕ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಕಳೆದ ಫೆಬ್ರುವರಿಯಲ್ಲಿ ವಾಷಿಂಗ್ಟನ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಅವರಿಗೆ ಯಾವುದೇ ಸಮನ್ಸ್ ನೀಡಿಲ್ಲ ಎಂದು ಅಮೆರಿಕದ ನ್ಯಾಯಾಲಯವೊಂದು ಸ್ಪಷ್ಟಪಡಿಸಿದೆ.
ಈ ಮೂಲಕ ಭಾರತದ ಉನ್ನತ ಅಧಿಕಾರಿಗೆ ಸಮನ್ಸ್ ನೀಡಲಾಗಿತ್ತು ಎಂದು ಆರೋಪಿಸಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹೇಳಿದ್ದ ಹೇಳಿಕೆಯನ್ನು ಕೋರ್ಟ್ ತಳ್ಳಿಹಾಕಿತು.
ಪನ್ನೂ ಅವರು ಡೊಭಾಲ್ ಮತ್ತು ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಅವರ ವಿರುದ್ಧ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪನ್ನೂ ಹತ್ಯೆಗೆ ಭಾರತ ಸರ್ಕಾರದ ಅಧಿಕಾರಿಗಳೊಂದಿಗೆ ಸೇರಿ ಸಂಚು ರೂಪಿಸಿದ್ದ ಆರೋಪ ಗುಪ್ತಾ ಅವರ ಮೇಲಿದೆ.