ಮಂಗಳೂರು: ಯುವ ತಲೆಮಾರನ್ನು ಕನ್ನಡಪರ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗಿಗಳಾಗಿಸುವ ರೀತಿಯಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜತೆಗೆ ಅವಕಾಶ ವಂಚಿತ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸುವ ವೇದಿಕೆಯಾಗಿ ನೂತನ ಪರಿಷತ್ತು ಕಾರ್ಯವೆಸಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು.
ಅವರು ಮಂಗಳೂರಿನ ಕಿನ್ನಿಗೋಳಿಯ ಯುಗ ಪುರುಷ ಸಭಾ ಭವನದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರವನ್ನು ಕನ್ನಡ ಧ್ವಜ ಎತ್ತಿ ಹಿಡಿಯುವ ಮೂಲಕ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಯುಗ ಪುರುಷ ಕಿನ್ನಿಗೋಳಿ ಆಶ್ರಯದಲ್ಲಿ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಕಾಸರಗೋಡು, ಕಾಸರಗೋಡು ಕನ್ನಡ ಭವನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಯುಕ್ತ ಸಹ ಬಾಗಿತ್ವದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭ ಕನ್ನಡ ಭವನದ ಪ್ರಥಮ 'ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025'ನ್ನು ಕನ್ನಡ ಭವನ ಸ್ಥಾಪಕ ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾ ರಾಣಿ ಟೀಚರ್ ಜಂಟಿಯಾಗಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯ ಅಧ್ಯಕ್ಷರಾಗಿದ್ದ ಧರ್ಮದರ್ಶಿ ಹರಿಕೃಷ್ಣ ಪುನರೂರು, ಶ್ರೀಪತಿ ಭಟ್ ಮೂಡಿಬಿದ್ರೆ, ಯುಗಪುರುಷ ಮಾಸಪತ್ರಿಕೆಯ ಭುವನಾಬಿರಾಮ ಉಡುಪ, ಕಥಾಬಿಂದು ಪ್ರದೀಪ್ ಕುಮಾರ್, ಪ್ರಾಂಶುಪಾಲ ರಾಜೇಶ್ ಚಂದ್ರ, ಸತ್ಯವತಿ ಭಟ್ ಕೊಳಚಪ್ಪು, ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಅಧ್ಯಕ್ಷ ಪ್ರವೀಣ್ ಕುಮಾರ್, ಪಮ್ಮಿ ಕೊಡಿಯಾಲ ಬೈಲ್, ಸಂದ್ಯಾ ರಾಣಿ ಟೀಚರ್ ರೇಖಾ ಸುದೇಶ್ ರಾವ್, ಅಪೂರ್ವ ಕಾರಂತ್, ವಸಂತ ಕೆರೆಮನೆ ಅನಿತಾ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಸ್ವಾಗತಿಸಿದರು. ದ. ಕ. ಘಟಕ ಕಾರ್ಯದರ್ಶಿ ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಉಷಾ ಶಶಿಧರ್ ವಂದಿಸಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಥಮ ಚುಟುಕು ಸ್ಪರ್ಧಾ ವಿಭಾಗದಲ್ಲಿ ವಿಜೇತರಾದ5ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, "ದಕ್ಷಿಣ ಕನ್ನಡ ಜಿಲ್ಲಾ ಕಾವ್ಯ ಪ್ರಶಸ್ತಿ
ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ಸಂಚಾಲಾಕಿ ಯಾದ ಡಾ. ಶಾಂತಾ ಪುತ್ತೂರು ಸ್ವಾಗತಿಸಿ, ಘಟಕ ಕಾರ್ಯದರ್ಶಿ ಅಪೂರ್ವ ಕಾರಂತ್ ಕಾರ್ಯಕ್ರಮ ನಿರ್ವಹಿಸಿದರು, ಉಷಾ ಶಶಿಧರ್ ವಂದಿಸಿದರು.