ಕಾಸರಗೋಡು : ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ 'ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ' ಎಂಬ ಕಾರ್ಯಕ್ರಮದಂಗವಾಗಿ ಹೊಸದುರ್ಗದಲ್ಲಿ ಕನ್ನಡವನ್ನು ಎತ್ತಿಹಿಡಿದ ಹಿರಿಯ ಚೇತನ, ನಿವೃತ್ತ ಶಿಕ್ಷಕ ಸಿ. ಸುಬ್ರಾಯ ಅವರನ್ನು ಕೀಕಾನ ದಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಸುಬ್ರಾಯ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಬೇಕಲ ಉಪಜಿಲ್ಲಾ ಶಿಕ್ಷಣಾಧಿಕಾರಿ ಅರವಿಂದ.ಕೆ ಅಭಿನಂದನಾ ಭಾಷಣ ಮಾಡಿದರು. ತಮ್ಮ ಸ್ವಂತ ಜಾಗವನ್ನು ಉಚಿತವಾಗಿ ನೀಡಿ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಿ ಕೀಕಾನದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಿದ ಸುಬ್ರಾಯ ಅವರು ಕೀಕಾನ ಶಾಲೆಯ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ ಎಂದು ತಿಳಿಸಿದರು.
ನಿವೃತ್ತ ಜಿಲ್ಲಾ ಶಿಕ್ಷಣ ಉಪನಿರ್ದೇಶಕ ನಂದಿಕೇಶನ್.ಎನ್, ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ರಾಜಗೋಪಾಲ.ಕೆ, ನಿವೃತ್ತ ಮುಖ್ಯ ಶಿಕ್ಷಕಿ ಶಶಿಕಲಾ .ಎಂ, ನಿವೃತ್ತ ಪ್ರಾಧ್ಯಾಪಕ ಚಂದ್ರಹಾಸ. ಪಿ ರಾಜೇಶ್ ಕೀಕಾನ, ಮೊದಲಾದವರು ಉಪಸ್ಥಿತರಿದ್ದರು. ಸಿ. ಸುಬ್ರಾಯ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಕಲ್ಲಕಟ್ಟ ಎಂ.ಎ .ಯು.ಪಿ. ಶಾಲಾ ಶಿಕ್ಷಕಿ ನಿರೀಕ್ಷಾ ವಂದಿಸಿದರು.