ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ದೇವಾಲಯಕ್ಕೆ ಭೇಟಿ ನೀಡಿ ಶ್ರೀದೇವರ ಪ್ರಸಾದ ಸ್ವೀಕರಿಸಿದರು.
: ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿಲ್ಪಾ ಡಿ. ಅವರು ಕುಟುಂಬದವರ ಜತೆ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಮಾಣಿಲಶ್ರೀಧಾಮದ ಶ್ರೀ ಮೋಹನದಾಸ ಸವಾಮೀಜಿ ದಿವ್ಯ ಉಪಸ್ಥಿತರಿದ್ದರು.
ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಅವರನ್ನು ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಬರಮಾಡಿಕೊಂಡರು.