ಭುವನೇಶ್ವರ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಡಿಶಾದ ಜಾರ್ಸುಗುಡ ಜಿಲ್ಲೆಯಲ್ಲಿ ಸುಮಾರು 12 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಆರೋಪಿಗಳನ್ನು ಬಂಧಿಸಿದೆ ಎಂದು ಒಡಿಶಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆರೋಪಿಗಳನ್ನು ವಿಚಾರಣೆಗಾಗಿ ಬನ್ಹರ್ಪಾಲ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
'ಎಸ್‌ಟಿಎಫ್ ವಶಕ್ಕೆ ಪಡೆದಿರುವ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹಿಂಸಾಚಾರ ನಡೆದ ದಿನದಂದು ಅವರು ಮುರ್ಶಿದಾಬಾದ್‌ನಲ್ಲಿ ಇದ್ದರು ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏಪ್ರಿಲ್ 11 ಮತ್ತು 12 ರಂದು ಮುರ್ಶಿದಾಬಾದ್‌ನ ಸುತಿ, ಧುಲಿಯನ್ ಮತ್ತು ಜಂಗೀಪುರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.